ಬೆಂಗಳೂರು : ಕಾರ್ಮಿಕರ ದಿನಾಚರಣೆಯಂದೇ ಪೌರಕಾರ್ಮಿಕರಿಗೆ ಬಂಪರ್ ಗಿಫ್ಟ್ ಸಿಕ್ಕಿದ್ದು, 12,692 ಮಂದಿಗೆ ಸೇವಾ ಖಾಯಂ ಪತ್ರ ವಿತರಣೆ ಮಾಡಲಾಗಿದೆ.
ಇಂದು ಕಾರ್ಮಿಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ವೇತನದಡಿ ಕಾರ್ಯನಿರ್ವಹಿಸುತ್ತಿರುವ 12,692 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ.
ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯುತ್ತಿರುವ ಸಮಾರಂಭವನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಿದ್ದಾರೆ . ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿರುವರು. ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ.
ಪೌರಕಾರ್ಮಿಕರು ಬೆಂಗಳೂರು ನಗರವನ್ನು ಸುಂದರವಾಗಿಸಿದ್ದಾರೆ.
ಕೃಷಿಕ, ಕಾರ್ಮಿಕ, ಶಿಕ್ಷಕ, ಸೈನಿಕ ಈ ದೇಶದ ಅಭಿವೃದ್ಧಿಯ ಆಧಾರಸ್ತಂಭಗಳು. ಪೌರ ಕಾರ್ಮಿಕರನ್ನು ಸ್ವಚ್ಛತಾ ರಾಯಭಾರಿಗಳಂತೆ ನಮ್ಮ ಸರ್ಕಾರ ಭಾವಿಸುತ್ತದೆ. ಪರಿಸರ ಯೋಧರಂತೆ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಬೆಂಗಳೂರು ನಗರವನ್ನು ಸುಂದರವಾಗಿಸಿದ್ದಾರೆ. ಚುನಾವಣೆ ಪೂರ್ವದಲ್ಲಿ ನಿಮ್ಮ ಬದುಕಿಗೆ ಹೊಸ ರೂಪವನ್ನು ನೀಡುತ್ತೇವೆ ಎಂದು ಪೌರಕಾರ್ಮಿಕರಿಗೆ ಮಾತು ಕೊಟ್ಟಿದ್ದೆವು. ಕೊಟ್ಟ ಮಾತಿನಂತೆ 12 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರ ಕೆಲಸ ಖಾಯಂಗೊಳಿಸಿ, ಖಾಯಂಮಾತಿ ಪತ್ರ ನೀಡುವ ಮೂಲಕ ಶ್ರಮಿಕರ ಬದುಕಿನಲ್ಲಿ ಬದಲಾವಣೆ ತಂದಿದ್ದೇವೆ.
ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂಬುವುದು ನಮ್ಮ ಸರ್ಕಾರದ ಆಶಯ. ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಬಿಬಿಎಂಪಿ ಬಜೆಟ್ನಲ್ಲಿ 730 ಕೋಟಿ ರೂ. ಮೀಸಲಿಡಲಾಗಿದೆ. ಯಾರಿಗೂ ಒಂದು ರೂಪಾಯಿ ಲಂಚ ನೀಡದೇ ಪೌರಕಾರ್ಮಿಕರು ನೇಮಕಾತಿ ಆದೇಶ ಪತ್ರ ಪಡೆಯಬೇಕು. ನಿಮ್ಮೆಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ನಾನು, ನಮ್ಮ ಸರ್ಕಾರ ನಿರಂತರವಾಗಿ ಮಾಡಲಿದ್ದೇವೆ. ಪೌರ ಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಸಂಕಲ್ಪ ಮತ್ತು ಬದ್ಧತೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಟ್ವೀಟ್
ಶ್ರಮಿಕರ ದಿನದಂದೇ ಪೌರಕಾರ್ಮಿಕರ ಕಲ್ಯಾಣ! ನಮ್ಮ ಸರ್ಕಾರ ಪ್ರತಿ ಹಂತದಲ್ಲೂ ಪೌರಕಾರ್ಮಿಕರ ಜೊತೆಯಲ್ಲಿ ನಿಂತಿದೆ. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ 12,692 ಪೌರ ಕಾರ್ಮಿಕರ ಕೆಲಸವನ್ನು ಖಾಯಂಗೊಳಿಸಿ, ಅವರ ಬದುಕಿನಲ್ಲಿ ಹೊಸ ಬದಲಾವಣೆ ತರುತ್ತಿದೆ. ಅವರ ವೇತನವನ್ನು 50,000 ರೂ.ವರೆಗೆ ಹೆಚ್ಚಿಸಿ ಹೊಸ ಅಭಿವೃದ್ಧಿಯ ಮಾದರಿಯನ್ನು ನಿರ್ಮಿಸಿದೆ ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.
ಪೌರಕಾರ್ಮಿಕರ ಅಭಿವೃದ್ಧಿಗಾಗಿ ಬಿಬಿಎಂಪಿ ಬಜೆಟ್ನಲ್ಲಿ 730 ಕೋಟಿ ರೂ. ಮೀಸಲಿಟ್ಟಿದೆ. ಪೌರಕಾರ್ಮಿಕರ ಪಿಂಚಣಿಗಾಗಿ 107 ಕೋಟಿ ರೂ. ಮೀಸಲಿಟ್ಟು, ರಾಜ್ಯ ಸರ್ಕಾರ ಪೌರಕಾರ್ಮಿಕರ ಪರವಾಗಿದೆ ಎಂದು ಸಾಬೀತುಪಡಿಸಿದೆ ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 12,692 ಪೌರಕಾರ್ಮಿಕರಿಗೆ ಸೇವಾ ಖಾಯಂ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ @siddaramaiah , ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ @kharge ಅವರು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @rssurjewala ಅವರೊಂದಿಗೆ ಪಾಲ್ಗೊಂಡು, ಮಾತನಾಡಿದೆ.
— DK Shivakumar (@DKShivakumar) May 1, 2025
ಕೃಷಿಕ,… pic.twitter.com/BdxINkRVYR
ಶ್ರಮಿಕರ ದಿನದಂದೇ ಪೌರಕಾರ್ಮಿಕರ ಕಲ್ಯಾಣ!
— DK Shivakumar (@DKShivakumar) May 1, 2025
ನಮ್ಮ ಸರ್ಕಾರ ಪ್ರತಿ ಹಂತದಲ್ಲೂ ಪೌರಕಾರ್ಮಿಕರ ಜೊತೆಯಲ್ಲಿ ನಿಂತಿದೆ. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ 12,692 ಪೌರ ಕಾರ್ಮಿಕರ ಕೆಲಸವನ್ನು ಖಾಯಂಗೊಳಿಸಿ, ಅವರ ಬದುಕಿನಲ್ಲಿ ಹೊಸ ಬದಲಾವಣೆ ತರುತ್ತಿದೆ. ಅವರ ವೇತನವನ್ನು 50,000 ರೂ.ವರೆಗೆ ಹೆಚ್ಚಿಸಿ ಹೊಸ ಅಭಿವೃದ್ಧಿಯ ಮಾದರಿಯನ್ನು ನಿರ್ಮಿಸಿದೆ.… pic.twitter.com/zSEyHUdJvm