ಕೋಲಾರ: ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದರ ಬೆನ್ನಲ್ಲೇ ಕೋಲಾರ ರೈತರು ಮತ್ತು ವರ್ತಕರು ಕೂಡ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ.
ಕೋಲಾರದಿಂದ ಪಾಕಿಸ್ತಾನಕ್ಕೆ ಸರಬರಾಜು ಮಾಡುತ್ತಿದ್ದ ಟೊಮೆಟೊ ರಫ್ತಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಟೊಮೆಟೊ ಸರಬರಾಜು ಮಾಡದಿರಲು ರೈತರು ನಿರ್ಧರಿಸಿದ್ದಾರೆ.
ಏಷ್ಯಾ ಖಂಡದಲ್ಲಿಯೇ ಎರಡನೇ ಅತಿ ದೊಡ್ಡ ಟೊಮೆಟೊ ಮಾರುಕಟ್ಟೆಯಾಗಿರುವ ಕೋಲಾರದಿಂದ ಹೊರ ದೇಶಗಳಿಗೂ ಟೊಮೆಟೊ ರಫ್ತಾಗುತ್ತದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಕೋಲಾರದಿಂದ ಟೊಮೆಟೊ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ದುಬೈ ಸೇರಿದಂತೆ ವಿವಿಧ ದೇಶಗಳಿಗೆ ರೈತರು ರಫ್ತು ಮಾಡುತ್ತಾರೆ. ಆದರೆ ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ರೈತರು ಮತ್ತು ವರ್ತಕರು ನಿರ್ಧರಿಸಿದ್ದಾರೆ.
ವಾರ್ಷಿಕವಾಗಿ ಸುಮಾರು 800 ರಿಂದ 900 ಟೊಮೆಟೊ ಕೋಲಾರದಿಂದ ಪಾಕಿಸ್ತಾನಕ್ಕೆ ಸರಬರಾಜು ಮಾಡಲಾಗುತ್ತಿತ್ತು. ಈಗ ಟೊಮೆಟೊ ಕಳುಹಿಸದಿರಲು ನಿರ್ಧರಿಸಿದ್ದಾರೆ.