ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಅಮೆರಿಕ ಸಂಪೂರ್ಣ ಬೆಂಬಲ ಘೋಷಣೆ

ನವದೆಹಲಿ: ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಅಮೆರಿಕ ಸಂಪೂರ್ಣ ಬೆಂಬ ಘೋಷಿಸಿದೆ. ಅಮೆರಿಕ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ದೂರವಾಣಿ ಕರೆ ಮಾಡಿ ಬೆಂಬಲ ನೀಡಿದ್ದಾರೆ.

ಫೋನ್ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೆ ಚರ್ಚೆ ನಡೆಸಿದ ಹೆಗ್ಸೆತ್, ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ಉಗ್ರರ ದಾಳಿಯ ಕುರಿತಾಗಿ ಅಮೆರಿಕ ರಕ್ಷಣಾ ಕಾರ್ಯದರ್ಶಿಗೆ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ, ತರಬೇತಿ ನೀಡುವ ಮತ್ತು ಹಣಕಾಸು ಒದಗಿಸುವ ಇತಿಹಾಸ ಹೊಂದಿದೆ. ಪಾಕಿಸ್ತಾನವು ಒಂದು ರಾಕ್ಷಸ ರಾಷ್ಟ್ರ ಎಂದು ಬಹಿರಂಗವಾಗಿದೆ. ಜಾಗತಿಕ ಭಯೋತ್ಪಾದನೆಯನ್ನು ಪಾಕಿಸ್ತಾನ ಉತ್ತೇಜಿಸುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟದಲ್ಲಿ ಅಮೆರಿಕ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಹೆಗ್ಸೆತ್ ತಿಳಿಸಿದ್ದಾರೆ. ಜಾಗತಿಕ ಸಮುದಾಯವು ಇಂತಹ ಘೋರ ಭಯೋತ್ಪಾದನಾ ಕೃತ್ಯಗಳನ್ನು ಸ್ಪಷ್ಟವಾಗಿ ನಿಸ್ಸಂದಿಗ್ಧವಾಗಿ ಖಂಡಿಸಲಿ ಎಂದು ಪೀ ಹೇಳಿದ್ದಾರೆ.

ಭಾರತದೊಂದಿಗೆ ಅಮೆರಿಕ ಯಾವಾಗಲೂ ನಿಲ್ಲುತ್ತದೆ. ಭಾರತ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read