ಹುಬ್ಬಳ್ಳಿ: ಜಾತಿಗಣತಿ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿಗಣತಿಯನ್ನು ಎಷ್ಟು ದಿನದಲ್ಲಿ ಮುಗಿಸುತ್ತೇವೆ ಎಂದು ಹೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ನಡೆದ ಕಾಂಗ್ರೆಸ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಜಾತಿ ಗಣತಿ ಬಗ್ಗೆ ಪ್ರಸ್ತಾಪಿಸಿರಬೇಕು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರತಿ ವರ್ಷ 5 ಲಕ್ಷ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕೊಡುತ್ತಿದ್ದೇವೆ. ಆದರೆ, ಕೇವಲ 60 ಸಾವಿರ ಕೋಟಿ ರೂಪಾಯಿ ವಾಪಸ್ ಕೊಡುತ್ತಿದೆ ಎಂದು ದೂರಿದ್ದಾರೆ.
ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯದಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಈಗ ಯಾತ್ರೆಯನ್ನು ರದ್ದು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ಮೋದಿ ಪ್ರಧಾನಿ ಆದ ಮೇಲೆ ಎಲ್ಲಾ ರಾಜ್ಯಗಳಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ಬೆಲೆ ಏರಿಕೆ ಮಾಡಿ ನಮ್ಮ ಮುಖಕ್ಕೆ ಎರಚುತ್ತಿದ್ದಾರೆ. ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮಲ್ಲಿ ಬಸ್ ಟಿಕೆಟ್ ದರ, ಹಾಲಿನ ದರ ಕಡಿಮೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.