HomeLatest NewsBREAKING NEWS: ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು: ಮಾರಕಾಸ್ತ್ರಗಳಿಂದ ಥಳಿಸಿ ಹಿಂದೂ ಕಾರ್ಯಕರ್ತನ ಹತ್ಯೆ

BREAKING NEWS: ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು: ಮಾರಕಾಸ್ತ್ರಗಳಿಂದ ಥಳಿಸಿ ಹಿಂದೂ ಕಾರ್ಯಕರ್ತನ ಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಕೊಲೆ ಮಾಡಲಾಗಿದೆ. ಸುಹಾಸ್ ಶೆಟ್ಟಿ ಕೊಲೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ.

ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿಯ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.

ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಘಟನೆ ನಡೆದಿದೆ. 2022ರ ಜುಲೈ 28 ರಂದು ಫಾಜಿಲ್ ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದ. ಸುಹಾಸ್ ಶೆಟ್ಟಿ. ಹಲವಾರು ಕೊಲೆ, ಕೊಲೆ ಯತ್ನ ಕೇಸ್ ನ ಆರೋಪಿಯಾಗಿದ್ದ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೌಡಿಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಹಿನ್ನೆಲೆ ಮಂಗಳೂರಿನ ಎಜೆ ಆಸ್ಪತ್ರೆ ಬಳಿ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಮಂಗಳೂರಿನ ಎಜೆ ಆಸ್ಪತ್ರೆಯ ಬಳಿ ಹಿಂದೂ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಎಜೆ ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಮೊದಲಾದವರು ಆಗಮಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular