HomeLatest NewsBIG NEWS: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಖಂಡಿಸಿ ಇಂದು ‘ದಕ್ಷಿಣ ಕನ್ನಡ ಜಿಲ್ಲಾ ಬಂದ್’...

BIG NEWS: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಖಂಡಿಸಿ ಇಂದು ‘ದಕ್ಷಿಣ ಕನ್ನಡ ಜಿಲ್ಲಾ ಬಂದ್’ ಕರೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಂಗಳೂರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು. ಜಿಹಾದ್ ಇಸ್ಲಾಮಿಕ್ ಉಗ್ರ ಮುಸಲ್ಮಾನರು ಹತ್ಯೆ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದು ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ. ಪೊಲೀಸ್ ಇಲಾಖೆ ವೈಫಲ್ಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಂಗಳೂರಿನಲ್ಲಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular