HomeLatest NewsBREAKING: ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಮಂಗಳೂರು ಬಂದ್: 3 ಬಸ್ ಗಳ ಮೇಲೆ ಕಲ್ಲು...

BREAKING: ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಮಂಗಳೂರು ಬಂದ್: 3 ಬಸ್ ಗಳ ಮೇಲೆ ಕಲ್ಲು ತೂರಾಟ

ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.

ಇದೇ ವೇಳೆ ಮೂರು ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದ ಬಳಿ ಘಟನೆ ನಡೆದಿದೆ. ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಮಂಗಳೂರಿನಲ್ಲಿ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ವ್ಯಾಪಾರ ವಹಿವಾಟು ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಂದ್ ಕರೆ ನೀಡಲಾಗಿದ್ದು,  ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಎನ್ಎಸ್ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ ಮೇ 6ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular