ಬೆಂಗಳೂರು : ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಇಂದು, ಮೇ 2, 2025 ರಂದು 11:30 ಕ್ಕೆ ಕರ್ನಾಟಕ SSLC ಫಲಿತಾಂಶವನ್ನು ಪ್ರಕಟಿಸಿದೆ.ಇದೀಗ ಕರ್ನಾಟಕದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ . ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿ ನಡೆಸುವ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ.
ಈ ರೀತಿ ರಿಸಲ್ಟ್ ಚೆಕ್ ಮಾಡಿ
1) ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ
2) ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ.
‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ
3) SMS ಮೂಲಕ ಫಲಿತಾಂಶ ಪಡೆಯಲು
4) KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ 240 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆದಿತ್ತು ಹಾಗೂ 65,000 ಮೌಲ್ಯಮಾಪಕರು ಭಾಗಿಯಾಗಿದ್ದರು ವಿದ್ಯಾರ್ಥಿಗಳು ಫಲಿತಾಂಶಗಳನ್ನು 12.30 ರ ನಂತರ kseab.karnataka.gov.in ಅಥವಾ karresults.nic.in ನಲ್ಲಿ ಪರಿಶೀಲಿಸಬಹುದು. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿದ್ದು, 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ.