HomeLatest NewsBREAKING : ‘ಸುಹಾಸ್ ಶೆಟ್ಟಿ’ ಕೊಲೆ ಕೇಸ್​​ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಯತ್ನ...

BREAKING : ‘ಸುಹಾಸ್ ಶೆಟ್ಟಿ’ ಕೊಲೆ ಕೇಸ್​​ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಯತ್ನ : ಇಬ್ಬರು ಆರೋಪಿಗಳು ಅರೆಸ್ಟ್.!

ಉಡುಪಿ : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ನಡೆದಿದೆ. ಈ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಅಟೋ ಚಾಲಕ ಅಬೂಬಕ್ಕರ್ ಮೇಲೆ ದಾಳಿ ನಡೆದಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್ ಕೊಲೆ ಯತ್ನ ನಡೆದಿದೆ. ಸುಶಾಂತ್ ಹಾಗೂ ಸಂದೇಶ ಎಂಬುವವರು ಕೊಲೆಗೆ ಯತ್ನಿಸಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಯತ್ನ ನಡೆಸಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular