ಮಂಗಳೂರು: ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆಯಲ್ಲಿ ನಾಳೆ ಮಂಗಳೂರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಪೊಲೀಸರೊಂದಿಗೆ ಸಭೆ ನಡೆಸಲಿದ್ದಾರೆ. ಹಿರಿಯ ಪೊಲೀಸ ಅಧಿಕಾರಿಗಳ ಜೊತೆಗೆ ಪರಮೇಶ್ವರ್ ಸಭೆ ನಡೆಸಲಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದೆ.
ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿ ಸಭೆ ನಡೆಸಲಿದ್ದಾರೆ. ಎಡಿಜಿಪಿ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು, ಎಸ್ಪಿ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.