HomeLatest NewsBIG NEWS: ವೈದ್ಯರು ಜೆನೆರಿಕ್ ಔಷಧ ಶಿಫಾರಸು ಮಾಡುವುದು ಕಡ್ಡಾಯಗೊಳಿಸಿ: ಸುಪ್ರೀಂ ಕೋರ್ಟ್ ಆದೇಶ

BIG NEWS: ವೈದ್ಯರು ಜೆನೆರಿಕ್ ಔಷಧ ಶಿಫಾರಸು ಮಾಡುವುದು ಕಡ್ಡಾಯಗೊಳಿಸಿ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೇಶಾದ್ಯಂತ ವೈದ್ಯರು ಜೆನೆರಿಕ್ ಔಷಧಿಗಳನ್ನು ಮಾತ್ರ ಶಿಫಾರಸು ಮಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಫೆಡರೇಶನ್ ಆಫ್ ಮೆಡಿಕಲ್ ಅಂಡ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ(FMSRI) ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಜುಲೈನಲ್ಲಿ ಮುಂದಿನ ವಿಚಾರಣೆ ನಿಗದಿಪಡಿಸಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ ಮೂವರು ನ್ಯಾಯಾಧೀಶರ ಪೀಠವು, ವೈದ್ಯರು ಜೆನೆರಿಕ್ ಔಷಧಿಗಳನ್ನು ಮಾತ್ರ ಶಿಫಾರಸು ಮಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ರಾಜಸ್ಥಾನದಲ್ಲಿ ಪ್ರತಿಯೊಬ್ಬ ವೈದ್ಯಕೀಯ ವೃತ್ತಿಪರರು ಜೆನೆರಿಕ್ ಔಷಧಿಯನ್ನು ಮಾತ್ರ ಶಿಫಾರಸು ಮಾಡಬೇಕು ಎಂದು ಈಗ ಕಾರ್ಯನಿರ್ವಾಹಕ ಸೂಚನೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular