ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಯನ್ನು ಮುಂದುವರೆಸಿದ್ದು, ಭಾರತೀಯ ಸೇನೆಯು ಪ್ರತಿದಾಳಿ ನಡೆಸಿದೆ.
ಮೇ 2-3 ರ ರಾತ್ರಿ, ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಕುಪ್ವಾರಾ, ಉರಿ ಮತ್ತು ಅಖ್ನೂರ್ ಪ್ರದೇಶಗಳ ಎದುರು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿತು. ಭಾರತೀಯ ಸೇನೆಯು ತಕ್ಷಣ ಮತ್ತು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿತು ಎಂದು ಭಾರತೀಯ ಸೇನೆ ತಿಳಿಸಿದೆ.
ಕಳೆದ 8 ದಿನಗಳಿಂದ ಪಾಕಿಸ್ತಾನ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ.
ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ಕ್ರಮ ಸೇರಿ ಅನೇಕ ಕಠಿಣ ಕ್ರಮಗಳನ್ನು ಭಾರತ ಕೈಗೊಂಡಿದ್ದು, ಇದರಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವಂತೆ ವಿವಿಧ ದೇಶಗಳ ನಾಯಕರಿಗೆ ಮನವಿ ಮಾಡಿದೆ.

