ಪಣಜಿ: ಗೋವಾದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಶಿರ್ಗಾವ್ ದೇವಸ್ಥಾನದಲ್ಲಿ ಘಟನೆ ನಡೆದಿದೆ.
ಕಾಲ್ತುಳಿತದಲ್ಲಿ 30ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶಿರ್ಗಾವ್ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದೆ. ಘಟನೆಯ ಕುರಿತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದಾರೆ.
ಶಿರ್ಗಾವ್ ತೀರ್ಥಯಾತ್ರೆಯ ಸಮಯದಲ್ಲಿ ಗೋವಾ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಗೋವಾದ ಶಿರ್ಗಾವ್ ದಲ್ಲಿರುವ ಲೈರೈ ದೇವಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಜನರು ಸಾವನ್ನಪ್ಪಿದ್ದು,, 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉತ್ತರ ಗೋವಾ ಎಸ್‌ಪಿ ಅಕ್ಷತ್ ಕೌಶಲ್ ತಿಳಿಸಿದ್ದಾರೆ.
6 dead and more than 15 injured in a stampede that occurred at the Lairai Devi temple in Shrigao, Goa: North Goa SP Akshat Kaushal
— ANI (@ANI) May 3, 2025
More details awaited