HomeLatest NewsBREAKING : ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ : CM ಸಿದ್ದರಾಮಯ್ಯ ನೇತೃತ್ವದ ಸಭೆಯ ಮುಖ್ಯಾಂಶಗಳು...

BREAKING : ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ : CM ಸಿದ್ದರಾಮಯ್ಯ ನೇತೃತ್ವದ ಸಭೆಯ ಮುಖ್ಯಾಂಶಗಳು ಹೀಗಿದೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಕಾವೇರಿ ನಿವಾಸದಲ್ಲಿ ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಈ ವೇಳೆ ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಸಿಎಂ ಹೇಳಿದರು.

ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:

  • ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.
  • ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು.
  • ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು.
  • ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ.
  • ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
  • ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.
  • ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂ ಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆʼʼ ಎನ್ನುವುದನ್ನು ಗಮನಿಸಬೇಕಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular