ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಉದ್ಯಮಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿಯ ಕಿರಣ್ ಜೈನ್ ಬಂಧಿತ ಆರೋಪಿ. ಬೆಂಗಳೂರಿನ ವಿವಿಧೆಡೆ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ ಎಂಟು ಯುವತಿಯರನ್ನು ರಕ್ಷಿಸಿದ್ದಾರೆ. ಎಂಟು ಮಧ್ಯವರ್ತಿಗಳನ್ನು ಕೂಡ ಬಂಧಿಸಲಾಗಿದ್ದು, ರಕ್ಷಿಸಲಾದ ಯುವತಿಯರಲ್ಲಿ ಒಬ್ಬಳು ಅಪ್ರಾಪ್ತ ಬಾಲಕಿ ಇದ್ದಳು.
ಹೆಚ್ಚಿನ ತನಿಖೆ ನಡೆಸಿದಾಗ ಆರೋಪಿ ಕಿರಣ್ ಜೈನ್ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಗೊತ್ತಾಗಿತ್ತು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಿರಣ್ ಜೈನ್ ನನ್ನು ಬಂಧಿಸಲಾಗಿದೆ. ಕೆಲಸ ಕೊಡಿಸುವುದಾಗಿ ನಂಬಿಸಿ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಲಾಗಿತ್ತು.