HomeLatest Newsತೆರಿಗೆ ವಂಚನೆ, ಸೋರಿಕೆ ತಡೆಯಬೇಕು, ಸಂಗ್ರಹದ ಗುರಿ ಮುಟ್ಟಲೇಬೇಕು: ಇದರಲ್ಲಿ ರಾಜಿ ಪ್ರಶ್ನೆಯೇ ಇಲ್ಲ: ಸಿದ್ಧರಾಮಯ್ಯ

ತೆರಿಗೆ ವಂಚನೆ, ಸೋರಿಕೆ ತಡೆಯಬೇಕು, ಸಂಗ್ರಹದ ಗುರಿ ಮುಟ್ಟಲೇಬೇಕು: ಇದರಲ್ಲಿ ರಾಜಿ ಪ್ರಶ್ನೆಯೇ ಇಲ್ಲ: ಸಿದ್ಧರಾಮಯ್ಯ

ಬೆಂಗಳೂರು: ಆರ್ಥಿಕ ಇಲಾಖೆಗೆ ಇನ್ನಷ್ಟು ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆಯ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶಪತ್ರ ವಿತರಿಸಿ ಅವರು ಮಾತನಾಡಿದರು.

ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೇತನ‌ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದು ತಿಳಿಸಿದ್ದಾರೆ.

11,495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ದೂರಿದ್ದಾರೆ.

ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಟೀಕಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular