ಬೆಳಗಾವಿ: ರಸ್ತೆಯಲ್ಲಿ ಬರುತ್ತಿದ್ದ ಯುವಕನನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ್ ನಗರದ ಹಿಲ್ ಗಾರ್ಡನ್ ರಸ್ತೆಯಲ್ಲಿ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ 26 ವರ್ಷದ ಪರಶುರಾಮ್ ನನ್ನು ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಗೊಂದಳಿ ಗಲ್ಲಿ ನಿವಾಸಿಯಾಗಿರುವ ಪರಶುರಾಮ್ ಕೊಲೆಯಾದ ವ್ಯಕ್ತಿ. ಕಾರ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಕೊಲೆ ಮಾಡಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಪರಶುರಾಮ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗೋಕಾಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.