ಬೆಂಗಳೂರು : ಮುಂದಿನ ವರ್ಷದಿಂದ ರಾಜ್ಯದಲ್ಲಿ ಶಂಕಾರಾಚಾರ್ಯ ಪ್ರಶಸ್ತಿ ಜಾರಿಗೊಳಿಸಲಾಗುತ್ತದೆ ಎಂದು ಸಚಿವ ಶಿವರಾಜ್ ಎಸ್ ತಂಗಡಗಿ ಮಾಹಿತಿ ನೀಡಿದ್ದಾರೆ.
ಶಂಕರಾಚಾರ್ಯರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಆಯ್ಕೆಗಾಗಿ ಸಮಿತಿಯನ್ನು ರಚಿಸಿ, ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ತಿಳಿಸಿದ್ದಾರೆ.

