HomeLatest NewsBIG NEWS : ಬೆಂಗಳೂರಿನ 'ನಮ್ಮ ಮೆಟ್ರೋ' ಆವರಣದಲ್ಲಿ ಗುಟ್ಕಾ ಉಗುಳಿದ ಪ್ರಯಾಣಿಕನಿಗೆ ದಂಡ ವಿಧಿಸಿದ...

BIG NEWS : ಬೆಂಗಳೂರಿನ ‘ನಮ್ಮ ಮೆಟ್ರೋ’ ಆವರಣದಲ್ಲಿ ಗುಟ್ಕಾ ಉಗುಳಿದ ಪ್ರಯಾಣಿಕನಿಗೆ ದಂಡ ವಿಧಿಸಿದ ‘BMRCL’!

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ ಬಿಎಂಆರ್ ಸಿಎಲ್ ದಂಡ ವಿಧಿಸಿದೆ.

ಕನಕಪುರ ರಸ್ತೆಯ ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ ದಂಡ
ಬೆಂಗಳೂರು, ಮೇ 3, 2025: ಮೇ 2 2025ರ ಸಂಜೆ ಸುಮಾರು 6:30ಕ್ಕೆ. ಗ್ರೀನ್ ಲೈನ್ನ ಕನಕಪುರ ರಸ್ತೆಯಲ್ಲಿರುವ ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಪ್ಲಾಟ್ಫಾರ್ಮ್ 01 ರ ಲಿಫ್ಟ್ ಬಳಿಯಲ್ಲಿ ಪಾನ್ ಮಸಾಲಾ ಉಗುಳುತ್ತಿದ್ದ ಪ್ರಯಾಣಿಕನನ್ನು ಪತ್ತೆ ಹಚ್ಚಿ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿದರು. ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸದಂಚುಗಳನ್ನು ಎಸೆಯುವುದು ಪರಿಸರ ಹಾಳಾಗುವುದಲ್ಲದೆ, ಇತರ ಪ್ರಯಾಣಿಕರ ಆರೋಗ್ಯಕ್ಕೂ ಅಪಾಯವನ್ನು ಉಂಟುಮಾಡುತ್ತದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸ್ವಚ್ಛ, ಆರೋಗ್ಯಕರ ಮತ್ತು ಸುರಕ್ಷಿತ ಸಾರ್ವಜನಿಕ ಸಾರಿಗೆಯ ವ್ಯವಸ್ಥೆಗಾಗಿ ಕಟಿಬದ್ರವಾಗಿದೆ. ಸ್ವಚ್ಛತೆ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಪ್ರಯಾಣಿಕರು ಸಹಕರಿಸಿ, ಇಂತಹ ಘಟನೆಗಳು ಸಂಭವಿಸಿದರೆ ತಕ್ಷಣವೇ ಮೆಟ್ರೋ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಬಿಎಂಆರ್ಸಿಎಲ್ ವಿನಂತಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular