HomeLatest NewsRain alert Karnataka : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :  ರಾಜ್ಯದಲ್ಲಿ 4-5 ದಿನ ಭಾರಿ...

Rain alert Karnataka : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :  ರಾಜ್ಯದಲ್ಲಿ 4-5 ದಿನ ಭಾರಿ ಮಳೆ ಮುನ್ಸೂಚನೆ.!

ಬೆಂಗಳೂರು: ಮುಂದಿನ 4-5 ದಿನ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 4-5 ದಿನ ವಾರ ಬೆಂಗಳೂರು ಸೇರಿದಂತೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು. ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೇ 2 ರಿಂದ 8 ರವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕೆಲವು ಸಂದರ್ಭದಲ್ಲಿ 40 ಕಿ.ಮೀ. ವೇಗದ ಗಾಳಿ ಬೀಸಲಿದೆ. ಮೇ 9ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular