ಬೆಂಗಳೂರು : ಒಳಮೀಸಲಾತಿ ಸಮೀಕ್ಷೆ ನಡೆಸಲು 65 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ , ಮೊದಲು ಮನೆ ಮನೆಗೆ ತೆರಳಿ ಅಂಕಿ ಅಂಶಗಳನ್ನು ಕಲೆ ಹಾಕಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿಕ್ಷಕರು ಮೊದಲ ಹಂತದಲ್ಲಿ ಮನೆ ಮನೆಗೆ ತೆರಳಿ ಅಂಕಿ ಅಂಶಗಳನ್ನು ಸಂಗ್ರಹಿಸುತ್ತಾರೆ. ಇಂದಿನಿಂದ ಮೇ 17 ರವರೆಗೆ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಒಟ್ಟು 3 ಹಂತಗಳಲ್ಲಿ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಇಂದಿನಿಂದ ಮೇ 17 ರವರೆಗೆ SC ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಒಳಮೀಸಲಾತಿ ಬಗ್ಗೆ ನಿಖರವಾದ ವರದಿ ನೀಡಲು ಸಮೀಕ್ಷೆ ನಡೆಸಲಾಗುತ್ತಿದೆ. ಇಂದಿನಿಂದ ಮೇ 17 ರವರೆಗೆ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ 101 ಜಾತಿಗಳು ಇದೆ ಎಂದು ಹೇಳಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಒಳ ಮೀಸಲಾತಿ ಕೊಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ ಎಂದರು.
https://www.facebook.com/KarnatakaVarthe.Official/videos/1439150367248814