ಬೆಂಗಳೂರು : ಮೂರು ಹಂತದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ, ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೇ 17 ರವರೆಗೆ ಸಮೀಕ್ಷೆ ನಡೆಯಲಿದೆ ಎಂದರು.
ಒಳಮೀಸಲಾತಿ ಜಾತಿ ಗಣತಿ ಸಮೀಕ್ಷೆ ಕಾರ್ಯಕ್ಕೆ 65 ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಅವರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಪರಿಶಿಷ್ಟ ಜಾತಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಮೊದಲ ಹಂತದಲ್ಲಿ ಮನೆ ಮನೆಗೆ ತೆರಳಿ ಅಂಕಿ ಅಂಶ ಸಂಗ್ರಹ ಮಾಡಲಾಗುತ್ತದೆ. 2ನೇ ಹಂತದಲ್ಲಿ ಮೇ 19 ರಿಂದ 21 ರವರೆಗೆ ವಿಶೇಷ ಶಿಬಿರ ಆಯೋಜನೆ ಮಾಡಲಾಗಿದೆ. ಆ ಶಿಬಿರಗಳಿಗೂ ಬಂದು ಜನರು ಮಾಹಿತಿಗಳನ್ನು ನೀಡಬಹುದು. 3ನೇ ಹಂತ ಮೇ 19 ರಿಂದ 23 ರವರೆಗೆ ನಡೆಯಲಿದೆ. ಮೂರನೇ ಹಂತದಲ್ಲಿ ಆನ್ಲೈನ್ ಮೂಲಕ ಮಾಹಿತಿ ಸಂಗ್ರಹ ಮಾಡಲಾಗುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ ನಿಖರವಾದ ವರದಿ ನೀಡಲು ಸಮೀಕ್ಷೆ ನಡೆಸಲಾಗುತ್ತಿದೆ. ಇಂದಿನಿಂದ ಮೇ 17 ರವರೆಗೆ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ 101 ಜಾತಿಗಳು ಇದೆ ಎಂದು ಹೇಳಿದ್ದಾರೆ.ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಒಳ ಮೀಸಲಾತಿ ಕೊಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ ಎಂದರು.