ಕಲಬುರಗಿ: ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಸಂಬಂಧ ಕಲಬುರಗಿಯ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪರೀಕ್ಷಾ ಕೇಂದ್ರದ ಸಿಬ್ಬಂದಿಗಳಾದ ಶರಣ ಗೌಡ ಹಾಗೂ ಗಣೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಧರಿಸಿದ್ದ ಜನಿವಾರವನ್ನು ತೆಗೆಸಿದ್ದರು. ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ನಡೆಗೆ ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತ್ತು.
ಸಿಇಟಿ ಪರೀಕ್ಷೆ ಬಳಿಕ ನೀಟ್ ಪರೀಕ್ಷೆಯಲ್ಲಿಯೂ ಇಂತಹ ಪ್ರಕರಣ ನಡೆದಿರುವುದಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಪರೀಕ್ಷಾ ಸಿಬ್ಬಂದಿ ಶ್ರೀಪಾದ್ ಪಾಟೀಲ್ , ಪರೀಕ್ಷಾ ಸಿಬ್ಬಂದಿ ನನ್ನ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಬಿಎನ್ ಎಸ್ ಕಾಯ್ದೆ 298ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.