ಬಳ್ಳಾರಿ: ಎಸ್.ಎಸ್.ಎಲ್.ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ನಡೆದಿದೆ.
ಸುಶಾಂತ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಮೇ 2ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ವಿಜ್ಞಾನ ವಿಷಯದಲ್ಲಿ ಸುಶಾಂತ್ ಫೇಲ್ ಆಗಿದ್ದ. ಅಂದಿನಿಂದ ಮನೆ ಬಿಟ್ಟು ಹೋಗಿರುವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.
ಸುಶಾಂತ್ ಪೋಷಕರು ಕಂಗಾಲಾಗಿದ್ದು, ಮಗನಿಗಾಗಿ ಹುಡುಕಾಟ ನಡೆಸಿದ್ದಾರೆ. ತೋರಣಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.