BIG NEWS : ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ |Helpline

ಬೆಂಗಳೂರು : ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ರಾಜ್ಯ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ – ಕಂಟ್ರೋಲ್ ರೂಂ – 9482300400 ಹಾಗೂ ಜಸ್ಟಿಸ್ ನಾಗಮೋಹನ ದಾಸ್ ಆಯೋಗ (ಒಳ ಮೀಸಲಾತಿ ಕುರಿತು) – 9481359000 ಕ್ಕೆ ಸಂಪರ್ಕಿಸಬಹುದಾಗಿದೆ. ಈ ಸಹಾಯವಾಣಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯೂ ಲಭ್ಯವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಮಾಹಿತಿಯನ್ನು ವೈಜ್ಞಾನಿಕವಾಗಿ ಕಡಿಮೆ ಅವಧಿಯಲ್ಲಿ ಪಡೆಯುವ ಉದ್ದೇಶದಿಂದ ಇ – ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ಮೊಬೈಲ್ ಆ್ಯಪ್ ಅನ್ನು ಬೆಳಗ್ಗೆ 6.30 ರಿಂದ ಸಂಜೆ 6.30ರ ವರೆಗೆ ಎನೇಬಲ್ ಮಾಡಲಾಗಿರುತ್ತದೆ. ಸದರಿ ಅವಧಿಯಲ್ಲಿ ಗಣತಿದಾರರು ಮನೆಗಳಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರು / ಕುಟುಂಬದವರು ತಮ್ಮ ಜಾತಿಯ ಕುರಿತು ಮಾಹಿತಿಯನ್ನು ನೀಡಬೇಕು. ಮನೆ – ಮನೆ ಸಮೀಕ್ಷೆ ಕೈಗೊಂಡ ಸಂದರ್ಭದಲ್ಲಿ ಮಾಹಿತಿ ಒದಗಿಸಲು ಸಾಧ್ಯವಾಗದೇ ಇರುವ ಪರಿಶಿಷ್ಟ ಜಾತಿಯ ಕುಟುಂಬದವರು ಸ್ವಯಂ ಪ್ರೇರಿತರಾಗಿ ವಿಶೇಷ ಶಿಬಿರಗಳಲ್ಲಿ ಭಾಗವಹಿಸಿ ಮಾಹಿತಿಯನ್ನು ಒದಗಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read