HomeLatest Newsರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು: ಸಿಎಂ ಖಡಕ್ ಸೂಚನೆ

ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು: ಸಿಎಂ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಒಂದಷ್ಟು ಸಲಹೆ, ಸೂಚನೆಗಳನ್ನು ನೀಡಿದದಾರೆ. ಅವು ಈ ಕೆಳಗಿನಂತಿವೆ.

ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು.

 ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು.

 ಅಗತ್ಯಬಿದ್ದರೆ ಮಾತ್ರ ಬೋರ್‌ವೆಲ್‌ಗಳನ್ನು ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್‌ವೆಲ್ ಕೊರೆದು ವೆಚ್ಚ ಮಾಡಬಾರದು.

 ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇಕಡಾ 55ರಷ್ಟು ಮಾನ್ಸೂನ್ ಪೂರ್ವ ಮಳೆ ಹೆಚ್ಚಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ಕಡಿಮೆ ಮಳೆ ದಾಖಲಾಗಿಲ್ಲ.

 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ.

 ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ.

 ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3ಸಾವಿರ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದ್ದು, 480 ಬೋರ್‌ವೆಲ್‌ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ.

ರಾಜ್ಯದ ಯಾವುದೇ ಒಂದು ಹಳ್ಳಿಯಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆಯನ್ನು ಈಗಲೇ ಮಾಡಬೇಕು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular