ಹುಬ್ಬಳ್ಳಿ: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಯ ಸಮಾರೋಪ ಮೇ 11ರಂದು ಸಂಜೆ 4 ಗಂಟೆಗೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಮೈದಾನದಲ್ಲಿ ನಡೆಯಲಿದೆ.
ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ತಿಳಿಸಿದ್ದಾರೆ.
ಹುಬ್ಬಳ್ಳಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಕೋಲಾರ ಮೇ 8ರಂದು ತುಮಕೂರು, ಚಿತ್ರದುರ್ಗ, ಮೇ 9ರಂದು ಬಳ್ಳಾರಿ, ವಿಜಯನಗರ, ಮೇ 10ರಂದು ಚಿಕ್ಕಬಳ್ಳಾಪುರದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ. ಮೇ 11ರಂದು ಹುಬ್ಬಳ್ಳಿಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಸಂಜೆ ದುರ್ಗದ ಬೈಲ್ ನಿಂದ ರ್ಯಾಲಿ ನಡೆಯಲಿದೆ ಎಂದರು. ಮೂರು ಸಾವಿರ ಮಠದ ಆವರಣದಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಅಂಗವಾಗಿ ಬೃಹತ್ ಸಮಾವೇಶ ನಡೆಯಲಿದ್ದು, ಕೇಂದ್ರ ಸಚಿವರು, ಸಂಸದರು, ಶಾಸಕರು, ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಚುನಾಯಿತ ಪ್ರತಿನಿಧಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.