ಬೆಂಗಳೂರು : ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಶೀಘ್ರವೇ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿಲ್ಲ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ಅನ್ನ ಸುವಿಧಾ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, 75 ವರ್ಷ ವಯಸ್ಸು ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರಿಸಬೇಕು, ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದರು.
You Might Also Like
TAGGED:ಕೆ.ಹೆಚ್ ಮುನಿಯಪ್ಪ