ರಾಯಚೂರು: ಆರೋಗ್ಯ ಇಲಾಖೆಯ ಲ್ಯಾಬ್ ಟೆಕ್ನಿಷಿಯನ್ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಮಸ್ಕಿಪಟ್ಟಣ ಸಮೀಪದ ಠಾಕೂರ್ ಲೇಔಟ್ ನಲ್ಲಿ ನಡೆದಿದೆ.
ಲ್ಯಾಬ್ ಟೆಕ್ನಿಷಿಯನ್ ಮಂಜುನಾಥ(33) ಮೃತಪಟ್ಟ ಅನುಮಾನಾಸ್ಪದವಾಗಿ ಮೃತಪಟ್ಟವರು. ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಮಂಜುನಾಥ ಶವವಾಗಿ ಪತ್ತೆಯಾಗಿದ್ದಾರೆ. ಮೆದಕಿನಹಾಳದ ಸರ್ಕಾರಿ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನಿಷಿಯನ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು.
ಪತ್ನಿ ಲಕ್ಷ್ಮಿ ಮತ್ತು ಇಬ್ಬರು ಮಕ್ಕಳೊಂದಿಗೆ ಮಸ್ಕಿ ಪಟ್ಟಣದಲ್ಲಿ ವಾಸವಾಗಿದ್ದರು. ಎರಡು ದಿನಗಳಿಂದ ಮಂಜುನಾಥ ನಾಪತ್ತೆಯಾಗಿದ್ದರು. ಚರಂಡಿಯೊಂದ ಸಮೀಪ ಎರಡು ದಿನ ನಿಂತಲ್ಲೇ ನಿಲ್ಲಿಸಲಾಗಿದ್ದ ಬೈಕ್ ಪರಿಶೀಲನೆ ನಡೆಸಲಾಗಿದ್ದು, ಬೈಕ್ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಮಸ್ಕಿ ಪಟ್ಟಣದ ಠಾಕೂರ್ ಲೇಔಟ್ ಬಳಿ ಮಂಜುನಾಥ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಮಸ್ಕಿ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಂಜುನಾಥ್ ಪತ್ನಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿದೆ.