ಬೆಂಗಳೂರು : ಬೆಂಗಳೂರಿನಲ್ಲಿ 6 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೆಂಪೇಗೌಡ ನಗರ ಪೊಲೀಸ್ ಇನ್ಸ್ಪೆಕ್ಟರ್ ಶಿವಾಜಿರಾವ್, ಪೊಲೀಸ್ ಸಬ್ ಇನ್ ಪೆಕ್ಟರ್ ಶಿವಾನಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪ್ರಕರಣವೊಂದನ್ನು ಇತ್ಯರ್ಥ ಪಡಿಸಲು 6 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಕೇಶವಮೂರ್ತಿ ಎಂಬುವವರ ದೂರಿನ ಮೇರೆಗೆ ಲೋಕಾಯುಕ್ತ ಎಸ್ ಪಿ ಶ್ರೀನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 1 ಲಕ್ಷ ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
You Might Also Like
TAGGED:ಲೋಕಾಯುಕ್ತ ಬಲೆಗೆ