ಬೆಂಗಳೂರು: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯಗಲಿದೆ. ಮೇ 9ರ ಬಳಿಕ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ರಾಯಊರು, ಕೊಪ್ಪಳ, ಹಾವೇರಿ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.