ಧಾರವಾಡ : 2025-26 ನೇ ಶೈಕ್ಷಣಿಕ ಸಾಲಿನಿಂದ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಭಾಷೆ, ಹೊಸ ಸಂಯೋಜನೆಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಮೇ 31, 2025 ರೊಳಗಾಗಿ ಇಲಾಖೆಯ ವೆಬ್ಸೈಟ್ www.pue.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಒಂದು ಪ್ರತಿಯನ್ನು ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕಾಲೇಜು ರಸ್ತೆ, ಆರ್ ಎನ್ ಶೆಟ್ಟಿ ಕ್ರೀಡಾಂಗಣ ಎದುರು ಧಾರವಾಡ ಇಲ್ಲಿಗೆ ಮುದ್ದಾಂ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
You Might Also Like
			TAGGED:ಪದವಿ ಪೂರ್ವ ಶಿಕ್ಷಣ ಇಲಾಖೆ		
		
 
			 
		 
		 
		 
		 Loading ...
 Loading ... 
		 
		 
		