ಹಾವೇರಿ: ಹೊಸ ಬೈಕ್ ಖರೀದಿಸಿ ಖುಷಿ ಖುಷಿಯಾಗಿ ಮನೆಗೆ ಬರುತ್ತಿದ್ದ ಯುವಕ ಭೀಕರ ಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗೌರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಹಾನಗಲ್ ನ ವರ್ದಿ ಗ್ರಾಮದ ನಾಗರಾಜ್ ಪವಾಡಿ (35) ಮೃತ ದುರ್ದೈವಿ. ಬೈಕ್ ನಲ್ಲಿದ್ದ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಹೊಸ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಹಾವೇರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.