ಬೆಂಗಳೂರು: ಕೆಪಿಎಸ್ ಸಿ ಮುಖ್ಯಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿಯಾಗಿದ್ದು, ಈ ರೀತಿಯ ವದಂತಿಗಳಿಗೆ ಯಾರೂ ಕಿವಿಗೊಡಏಡಿ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.
ಮೇ 5ರಂದು ನಡೆದ ಮುಖ್ಯ ಪರೀಕ್ಷೆಯ ಸಾಮಾನ್ಯ ಅಧ್ಯಯನ-1 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ದೂರು ಸಲ್ಲಿಸಿದ್ದರು. ಬೆಂಗಳೂರಿನ ಕಸ್ತೂರಬಾ ನಗರದ ಬಿವಿಎಂಪಿ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಆರೋಪಗಳು ಕೇಳಿಬಂದಿತ್ತು.
ಇದೀಗ ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕೆಪಿಎಸ್ ಸಿ ಆಯೋಗ, ಈ ವಿಚಾರದ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಪರೀಕ್ಷೆ ಭದ್ರತೆಗಾಗಿ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ಸತ್ಯಕ್ಕೆ ದೂರವಾದದ್ದು. ಇತರ ಅಭ್ಯರ್ಥಿಗಳು ಇದರಿಂದ ಹತಾಷರಾಗಬೇಡಿ. ಸುಳ್ಲು ವದಂತಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದೆ.