ಹೈದರಾಬಾದ್: ಶಾಸಕ ಜನಾರ್ಧನ ರೆಡ್ಡಿಗೆ ಹೈದರಾಬಾದ್ ಸಿಬಿಐ ಕೋರ್ಟ್ ಬಿಗ್ ಶಾಕ್ ನೀಡಿದೆ. ಓಬಳಾಪುರಂ ಮೈನಿಂಗ್ ಕೇಸ್ ನಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಡಳಿತದ ಅವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಇದಾಗಿದ್ದು, ಆಂಧ್ರ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದ ಅದಿರಿನ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.
ಜನಾರ್ಧನ ರೆಡ್ದಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಒಎಂಸಿ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ನಡೆದಿತ್ತು. ಜನಾರ್ರ್ಧನ ರೆಡ್ಡಿ ವಿರುದ್ಧ 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ನಷ್ಟವುಂಟಾಗಿದೆ.
You Might Also Like
TAGGED:ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣ