HomeLatest Newsದೇಶಾದ್ಯಂತ ಅಪಘಾತ ಗಾಯಾಳುಗಳಿಗೆ 1.5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ: ಕೇಂದ್ರ ಸರ್ಕಾರ ಆದೇಶ

ದೇಶಾದ್ಯಂತ ಅಪಘಾತ ಗಾಯಾಳುಗಳಿಗೆ 1.5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಮೊದಲ ಒಂದು ವಾರದವರೆಗೆ 1.5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಜಾರಿಗೊಳಿಸಿದೆ.

ಮಂಗಳವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಮೇ 5ರಿಂದಲೇ ಜಾರಿಗೆ ಬರುವಂತೆ ದೇಶಾದ್ಯಂತ ಸರ್ಕಾರಿ ಮತ್ತು ನಿಗದಿತ ಖಾಸಗಿ ಆಸ್ಪತ್ರೆಗಳಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ.

ದೇಶದ ಯಾವುದೇ ಭಾಗದಲ್ಲಿ ಅಪಘಾತದಲ್ಲಿ ಗಾಯಗೊಂಡವರು ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಸರ್ಕಾರಿ ಮತ್ತು ಸರ್ಕಾರ ನಿಗದಿಪಡಿಸಿದ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಸಕಾಲಕ್ಕೆ ಚಿಕಿತ್ಸೆ ಸಿಗದೇ ದೇಶಾದ್ಯಂತ ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಚ್ಚುತ್ತಿರುವ ಸಾವಿನ ಪ್ರಮಾಣ ತಗ್ಗಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular