HomeLatest NewsRCB ಗೆಲುವಿನ ಸಂಭ್ರಮಾಚರಣೆಯಲ್ಲಿ ವಿರಾಟ್ ಕೊಹ್ಲಿ ಕಟೌಟ್ ಗೆ ರಕ್ತಾಭಿಷೇಕ: ಎಫ್ಐಆರ್

RCB ಗೆಲುವಿನ ಸಂಭ್ರಮಾಚರಣೆಯಲ್ಲಿ ವಿರಾಟ್ ಕೊಹ್ಲಿ ಕಟೌಟ್ ಗೆ ರಕ್ತಾಭಿಷೇಕ: ಎಫ್ಐಆರ್

ಚಿತ್ರದುರ್ಗ: ವಿರಾಟ್ ಕೊಹ್ಲಿ ಕಟೌಟ್ ಗೆ ರಕ್ತಾಭಿಷೇಕ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮೇ 3ರಂದು ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಗೆಲುವು ಸಾಧಿಸಿದ ವೇಳೆ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮೇಕೆ ಬಲಿ ನೀಡಿ ವಿಕೃತಿ ಮೆರೆದಿದ್ದ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಮಾರಮ್ಮನಹಳ್ಳಿ ಗ್ರಾಮದ ಮೂವರ ವಿರುದ್ಧ ದೂರು ದಾಖಲಾಗಿದೆ.

ಮಾರಮ್ಮನಹಳ್ಳಿಯ ಸಣ್ಣಪಾಲಯ್ಯ, ಜಯಣ್ಣ, ತಿಪ್ಪೇಸ್ವಾಮಿ ಅವರ ವಿರುದ್ಧ ಪ್ರಾಣಿ ಬಲಿ ನಿಷೇಧ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ. ಮೇ 4ರಂದು ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಕತ್ತರಿಸಿ ಯುವಕರು ರಕ್ತಾಭಿಷೇಕ ಮಾಡಿದ್ದರು. ಮೇಕೆಯನ್ನು ಮಚ್ಚಿನಿಂದ ಕತ್ತರಿಸಿ ಎತ್ತಿ ಹಿಡಿದು ಕೊಯ್ಲು ಭಾವಚಿತ್ರಕ್ಕೆ ರಕ್ತ ಚಿಮ್ಮಿಸುವ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮೊಳಕಾಲ್ಮುರು ಠಾಣೆ ಪೋಲೀಸರು ಗ್ರಾಮಕ್ಕೆ ಭೇಟಿ ನೀಡಿ ಆರೋಪಿಗಳನ್ನು ಗುರುತಿಸಿ ಪ್ರಕರಣ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular