ನವದೆಹಲಿ : ಸಿಂಧೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದ ಉಗ್ರರಿಗೆ ಪ್ರಧಾನಿ ಮೋದಿ ತಕ್ಕ ಉತ್ತರ ನೀಡಿದ್ದಾರೆ. ಭಾರತ ಸರ್ಕಾರ ಆಪರೇಷನ್ ಸಿಂಧೂರ ನಡೆಸಿದ್ದು, ಪ್ರಧಾನಿ ಮೋದಿ ನಿಗಾದಲ್ಲೇ ಪಾಕಿಸ್ತಾನದ ಮೇಲೆ ದಾಳಿ ನಡೆದಿದೆ.
ಹೌದು, ಪಹಲ್ಗಾಮ್ ನಲ್ಲಿ ಪುರುಷರ ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿ ಕೊಂದಿದ್ದ ಉಗ್ರರು ಹೆಣ್ಣು ಮಕ್ಕಳ ಕುಂಕುಮ ಅಳಿಸಿ ಹೋಗಿ ನಿಮ್ಮ ಮೋದಿಗೆ ಹೇಳು ಎಂದು ಅಟ್ಟಹಾಸ ಮೆರೆದಿದ್ದರು. ಇದೀಗ ಭಾರತೀಯ ಸೇನೆ ಉಗ್ರರಿಗೆ ತಕ್ಕ ಪಾಠ ಕಲಿಸಿದೆ. ಉಗ್ರರ ಅಡಗುತಾಣ, ಕ್ಯಾಂಪ್ ಗಳ ಮೇಲೆ ದಾಳಿ ನಡೆಸಿ ನೂರಾರು ಉಗ್ರರನ್ನು ಹತ್ಯೆ ಮಾಡಿದೆ.
ಮೇ 7 ರ ಬುಧವಾರ ಮುಂಜಾನೆ 1:44 ಕ್ಕೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತವು ‘ಆಪರೇಷನ್ ಸಿಂಧೂರ್’ ತ್ರಿಪಕ್ಷೀಯ ‘ಆಪರೇಷನ್ ಸಿಂಧೂರ್’ ನಲ್ಲಿ ನಿಖರ ದಾಳಿ ನಡೆಸಿತು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಪಡೆಗಳು ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದವು.
ವರದಿಗಳ ಪ್ರಕಾರ, ಭಾರತೀಯ ಪಡೆಗಳು ಪಾಕಿಸ್ತಾನದ ಭಯೋತ್ಪಾದಕ ಸ್ಥಳಗಳನ್ನು ಗುರಿಯಾಗಿಸಿಕೊಂಡಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಕ್ಷಿಪಣಿ ದಾಳಿ ನಡೆಸಿದ್ದು, ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ.
Pakistan was preparing for mock drill by drafting memes on their twitter,
— Nehr_who? (@Nher_who) May 6, 2025
Operation Sindoor came out of syllabus.
9 strikes, all on the terror camps and this time with proof. pic.twitter.com/9ytYHZ5CcL