ಇಸ್ಲಮಾಬಾದ್: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನ ಅಮಾಯಕ ಪ್ರವಾಸಿಗರು ಬಲಿಯಾಗಿದ್ದರು. ಈ ಘಟನೆಗೆ ಪ್ರತಿಕಾರ ತೀರಿಸಿಕೊಂಡಿರುವ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚಾರಣೆ ಮೂಲಕ ಉಗ್ರರ ನೆಲೆಗಳನ್ನು ದ್ವಂಸಗೊಳಿಸಿದೆ.
ಪಾಕಿಸ್ತಾನದ 9 ಪ್ರಮುಖ ಉಗ್ರರ 21 ಕ್ಯಾಂಪ್ ಗಳ ಮೇಲೆ ದಾಳಿ ನಡೆಸಿರುವ ಭಾರತೀಯ ಸೇನೆ, ಉಗ್ರರ ನೆಲೆಗಳನ್ನು ನಾಶ ಮಾಡಿದೆ. ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಟೆರರಿಸ್ಟ್ ಮಸೂದ್ ಅಜರ್ ಕುಟುಂಬದ 14 ಜನರು ಸೇರಿದಂತೆ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ.
ಭಾರತೀಯ ಸೇನೆ ದಾಳಿಗೆ ಪಾಕಿಸ್ತಾನದ ನೆಲದಲ್ಲಿ ಉಗ್ರರು ಬೀದಿ ಹೆಣವಾಗಿ ಬಿದ್ದಿದ್ದಾರೆ. ಪಿಒಕೆಯ ಮುಜಾಫರಾಬಾದ್ ನಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದು, ಮೃತ ಉಗ್ರರ ಹೆಣಗಳನ್ನು ಸಾಗಿಸುತ್ತಿದ್ದ ದೃಶ್ಯ ಮಾಧ್ಯಮಗಳಲ್ಲಿ ವೈರಲ್ ಆಗಿದೆ.