ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಉಗ್ರರು ನಡೆಸಿದ ಗುಂಡಿನ ದಾಳಿಗೆ 26 ಅಮಾಯಕ ಪ್ರವಾಸಿಗರನ್ನು ಬಲಿಪಡೆದ ಕೃತ್ಯಕ್ಕೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಪ್ರತಿಕಾರ ತೀರಿಸಿಕೊಂಡಿದ್ದು, ಪಾಕಿಸ್ತಾನಿ ಉಗ್ರರ ನೆಲೆಗಳನ್ನು ನೆಲಸಮಗೊಳಿಸಿದೆ.
ಪಾಕಿಸ್ಯಾನದ 9 ಉಗ್ರರ ನೆಲೆಗಳನ್ನು ಹಾಗೂ 21 ಕ್ಯಾಂಪ್ ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ದಾಳಿಗೆ ಪಾಕಿಸ್ತಾನ ಪತರಗುಟ್ಟಿದೆ. ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಡುವೆ ಪಾಕಿಸ್ತಾನದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ರಾಷ್ಟ್ರೀಯ ಭದ್ರತೆ ಕುರಿತು ಪಾಕ್ ಪ್ರಧಾನಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಪಾಕ್ ಸೇನೆಯ ಹಿರಿಯ ಅಧಿಕಾರಿಗಳು, ಸಚಿವರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.