ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ನೇಮಕಾತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.9 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

 ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08182-255293/ 9380663606/ 9901914601 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read