ಬೆಂಗಳೂರು: ಬಿಜೆಪಿ ಶಾಸಕರ ಅಮಾನತು ಹಿನ್ನೆಲೆಯಲ್ಲಿ ನಾನು ಮುಖ್ಯಮಂತ್ರಿಗಳ ಜತೆ ಯಾವುದೇ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿದ್ದು, ಇದನ್ನು ಖಂಡಿಸಿ ನಾನು ಮುಖ್ಯಮಂತ್ರಿಗಳ ಜೊತೆ ಯಾವುದೇ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಫಾಸಿಲ್ ಕುಟುಂಬ ಭಾಗಿಯಾಗಿದೆ ಎಂದು ಪೊಲೀಸರು ಹೇಳಿದ್ದರೆ, ಭಾಗಿಯಾಗಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಒಂದು ಕೊಲೆಯ ಬಗ್ಗೆ ಸ್ಪೀಕರ್ ಮಾಧ್ಯಮದವರೊಂದಿಗೆ ಮಾತನಾಡಿದ್ದನ್ನು ನಾನು ನೋಡಿದ್ದು ಇದೇ ಮೊದಲು. ಈ ಕೊಲೆಗೂ ಖಾದರ್ ಅವರಿಗೂ ಏನು ಸಂಬಂಧ? ಅವರೇನು ಗೃಹ ಸಚಿವರಾ? ಕಾಂಗ್ರೆಸ್ ಪಕ್ಷದೊಳಗೆ ಇದ್ದಾರಾ ಎಂದು ಅಶೋಕ್ ಪ್ರಶ್ನಿಸಿದ್ದಾರೆ.