ಟೀಂ ಇಂಡಿಯಾ ನಾಯಕನ ರೇಸ್ ನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್

ನವದೆಹಲಿ: ರೋಹಿತ್ ಶರ್ಮಾ ಅವರಿಂದ ತೆರವಾದ ಟೆಸ್ಟ್ ತಂಡದ ನಾಯಕನ ಸ್ಥಾನಕ್ಕೆ ಹಲವು ಮಂದಿ ರೇಸ್ ನಲ್ಲಿದ್ದಾರೆ.

ಜೂನ್ 20ರಿಂದ ಇಂಗ್ಲೆಂಡ್ ಸರಣಿ ಆರಂಭವಾಗಲಿದ್ದು, ಅದಕ್ಕೂ ಮೊದಲೇ ಹೊಸ ನಾಯಕನ ಆಯ್ಕೆಯಾಗಬೇಕಿದೆ. ಟೆಸ್ಟ್ ತಂಡದ ನಾಯಕನ ಸ್ಥಾನಕ್ಕೆ ಹಿರಿತನ, ಅನುಭವದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್, ಜಸ್ ಪ್ರೀತ್ ಬೂಮ್ರಾ ಮುಂಚೂಣಿಯಲ್ಲಿದ್ದಾರೆ. ಇವರಿಬ್ಬರೂ ತಲಾ ಮೂರು ಪಂದ್ಯಗಳಿಗೆ ನಾಯಕರಾಗಿದ್ದಾರೆ.

ಆಯ್ಕೆ ಸಮಿತಿ ಹೊಸ ಮುಖಗಳನ್ನು ನಾಯಕತ್ವಕ್ಕೆ ಪರಿಗಣಿಸಿದಲ್ಲಿ ಶುಭಮನ್ ಗಿಲ್ ಮತ್ತು ರಿಷಬ್ ಪಂತ್ ಅವರಿಗೆ ಟೆಸ್ಟ್ ತಂಡದ ನಾಯಕತ್ವ ಸಿಗಬಹುದು. ಪ್ರಸ್ತುತ ತಂಡದಲ್ಲಿ ಹಿರಿಯ ಆಟಗಾರರೆಂದರೆ ವಿರಾಟ್ ಕೊಹ್ಲಿ ಒಬ್ಬರೇ. ಆದರೆ ಅವರು ಮತ್ತೆ ನಾಯಕತ್ವ ವಹಿಸಿಕೊಳ್ಳಲು ಒಪ್ಪುವರೇ ಎನ್ನುವುದು ಖಚಿತವಾಗಿಲ್ಲ. 36 ವರ್ಷದ ವಿರಾಟ್ ಕೊಹ್ಲಿ ಇನ್ನೆಷ್ಟು ವರ್ಷ ತಂಡದಲ್ಲಿ ಆಡುತ್ತಾರೆ ಎನ್ನುವುದು ಕೂಡ ಪ್ರಶ್ನೆಯಾಗಿದೆ. ಹೀಗಾಗಿ ಬೇರೆ ಆಯ್ಕೆಯತ್ತ ಬಿಸಿಸಿಐ ಚಿಂತನೆ ನಡೆಸಿದ್ದು, ಪ್ರಮುಖವಾಗಿ ಕನ್ನಡಿಗ ಕೆ.ಎಲ್. ರಾಹುಲ್, ಜಸ್ ಪ್ರೀತ್ ಬೂಮ್ರಾ, ಶುಭಮನ್ ಗಿಲ್ ಮತ್ತು ರಿಷಬ್ ಪಂತ್ ಅವರ ಹೆಸರು ಕೇಳಿ ಬರುತ್ತಿದೆ.

ಇವರಲ್ಲಿ ಕೆ.ಎಲ್. ರಾಹುಲ್ ಹೆಚ್ಚು ಅನುಭವಿಯಾಗಿದ್ದು, ತಂಡದ ಅಗತ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿಕೊಂಡು ಉತ್ತಮ ಪ್ರದರ್ಶನ ನೀಡಿದ್ದಾರೆ. ಏಕದಿನ ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಟೂರ್ನಿಗಳಲ್ಲಿಯೂ ವಿಕೆಟ್ ಕೀಪಿಂಗ್ ನಿರ್ವಹಿಸಿದ್ದಾರೆ. ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ –ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಹೆಚ್ಚು ಸ್ಥಿರ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅವರಿಗೆ ಟೆಸ್ಟ್ ತಂಡದ ನಾಯಕತ್ವ ಒಲಿಯಬಹುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read