HomeLatest NewsBIG NEWS: ಭಾರತೀಯ ಸೇನೆ ಯಶಸ್ಸಿಗಾಗಿ ಶುಕ್ರವಾರ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ: ಸಚಿವ ಜಮೀರ್ ಅಹ್ಮದ್...

BIG NEWS: ಭಾರತೀಯ ಸೇನೆ ಯಶಸ್ಸಿಗಾಗಿ ಶುಕ್ರವಾರ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ: ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಂ ನಲ್ಲಿ ಪಾಕಿಸ್ತಾನಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರು ಬಲಿಯಾಗಿರುವುದಕ್ಕೆ ಭಾರತೀಯ ಸೇನೆ ಪಾಕಿಸ್ತಾನ ಉಗ್ರರ ವಿರುದ್ಧ ಆಪರೇಶನ್ ಸಿಂಧೂರ್ ಕಾರ್ಯಾಚರಣೆ ನಡೆಸಿದ್ದು, ಭಾರತೀಯ ಸೇನೆ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾಥನೆ ಸಲ್ಲಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಸೂಚಿಸಿದ್ದಾರೆ.

ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿಗಾಗಿ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ವಖ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular