ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.