ಇಸ್ಲಾಮಾಬಾದ್: ಪಾಕಿಸ್ತಾನ ಸೇನೆ ಭಾರತದ 15 ನಗರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿಗೆ ಮುಂದಾಗಿದ್ದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇದೇ ವೇಳೆ ಭಾರತೀಯ ಸೇನೆ ಪಾಕ್ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದೆ.
ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ನಿನ್ನೆ ರಾತ್ರಿ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿಗೆ ಯತ್ನಿಸಿತ್ತು. ಆದರೆ ಭಾರತೀಯ ಸೇನೆ ಏರ್ ಡಿಫೆನ್ಸ್ ಸಿಸ್ಟಮ್ ಮೂಲಕ ಪಾಕಿಸ್ತಾನದ ಕ್ಷಿಪಣಿ ದಾಳಿಯನ್ನು ವಿಫಲಗೊಳಿಸಿದೆ. ಇದೇ ವೇಳೆ ಪಾಕಿಸ್ತಾನದ ದಾಳಿ ಯತ್ನಕ್ಕೆ ಭಾರತ ತಕ್ಕ ಪ್ರತ್ಯುತ್ತರವನ್ನು ನೀಡಿದೆ.
ಪಾಕಿಸ್ತಾನದ ಲಾಹೋರ್ ನಲ್ಲಿ ಪಾಕಿಸ್ತಾನ ಸೇನಾ ನೆಲೆಗಳ ಮೇಲೆ ಭಾರತದ ಕ್ಷಿಪಣಿ ದಾಳಿ ನಡೆದಿದೆ. ಭಾರತೀಯ ಸೇನೆ ಪಾಕಿಸ್ತಾನದ ಸೇನಾ ನೆಲೆಯನ್ನು ಧ್ವಂಸಗೊಳಿಸಿದೆ. ಲಾಹೋರ್ ನ ವಾಯು ರಕ್ಷಣಾ ನೆಲೆ ಧ್ವಂಸ ಮಡಲಾಗಿದೆ ಎಂದು ಭಾರತ ಸೇನೆ ತಿಳಿಸಿದೆ. ಇದರ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದ್ದು, ಯುದ್ಧದ ವಾತಾವರಣ ನಿರ್ಮಾಣವಾಗಿದೆ.