ಇಸ್ಲಾಮಾಬಾದ್: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿವಿಧ ನಗರಗಳಿಗೆ ನುಗ್ಗಿ ಭಾರತೀಯ ಸೇನೆ ಡ್ರೋನ್ ದಾಳಿ ನಡೆಸಿದೆ. ಭಾರತದ ದಾಳಿಯಲ್ಲಿ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ ಧ್ವಂಸಗೊಂಡಿದೆ.
ರಾವಲ್ಪಿಂಡಿಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನಸ ಸೂಪರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ಸ್ಟೇಡಿಯಂ ಮೇಲೆ ಡ್ರೋನ್ ದಾಳಿ ನಡೆದಿದ್ದು, ಭಾರತೀಯ ಸೇನೆ ಈ ದಾಳಿ ನಡೆಸಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ಆದರೆ ಭಾರತ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.
ಡ್ರೋನ್ ದಾಳಿ ಹಿನ್ನೆಲೆಯಲ್ಲಿ ಪಿಸಿಬಿ ಕ್ರಿಕೆಟ್ ಆಟಗಾರರಿಗೆ ರಾವಲ್ಪಿಂಡಿ ತೊರೆಯುವಂತೆ ಸೂಚನೆ ನೀಡಿದೆ. ಇದೇ ವೇಳೆ ಅಮೆರಿಕಾ ಕೂಡ ತನ್ನ ಪ್ರಜೆಗಳಿಗೆ ಲಾಹೋರ್ ತೊರೆಯಲು ಸೂಚನೆ ನೀಡಿದೆ.