HomeLatest NewsBREAKING NEWS: ದೇಶಾದ್ಯಂತ ಹೈ ಅಲರ್ಟ್: ಭದ್ರತೆ ಹೆಚ್ಚಳ: ಗಡಿಯಲ್ಲಿ ವಾಸಿಸುವ ಜನರ ಸ್ಥಳಾಂತರ

BREAKING NEWS: ದೇಶಾದ್ಯಂತ ಹೈ ಅಲರ್ಟ್: ಭದ್ರತೆ ಹೆಚ್ಚಳ: ಗಡಿಯಲ್ಲಿ ವಾಸಿಸುವ ಜನರ ಸ್ಥಳಾಂತರ

ಶ್ರೀನಗರ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಯುದ್ಧದ ವಾತಾವರಣ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸೇರಿದಂತೆ ದೇಶದಾದ್ಯಂತ ಕಟ್ಟೆಚ್ಚರವಹಿಸಲಾಗಿದೆ. ಹೆಚ್ಚಿನ ಭದ್ರತೆಗೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.

ಜಮ್ಮು-ಕಾಶ್ಮೀರ ಸೇರಿದಂತೆ ಭಾರತದ ಗಡಿ ರಾಜ್ಯಗಳಲ್ಲಿ ಎಲ್ಲಾ ಅರೆಸೇನಾಪಡೆಗಳನ್ನು ಹೆಚ್ಚುವರಿ ಭದ್ರತೆಗಾಗಿ ನಿಯೋಜಿಸಲಾಗಿದೆ. ಸಿಆರ್ ಪಿಎಫ್, ಬಿಎಸ್ ಎಫ್, ಐಟಿಬಿಪಿ ಮತ್ತು ಎಸ್ ಎಸ್ ಬಿ ಪಡೆಗಳನ್ನು ನಿಯೋಜಿಸಲಾಗಿದೆ.

ಎಲ್ಲಾ ಅರೆಸೇನಾ ಪಡೆಗಳಿಂದ 137 ಕಂಪನಿಗಳನ್ನು ರವಾನಿಸಲಾಗಿದೆ. ಗಡಿಯಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular