HomeLatest NewsBREAKING: ಪಾಕಿಸ್ತಾನದ 3 ಯುದ್ಧ ವಿಮಾನ, 200 ಕ್ಷಿಪಣಿ ಧ್ವಂಸಗೊಳಿಸಿದ ಭಾರತೀಯ ಸೇನೆ: ಭಾರತದ ಹಲವು...

BREAKING: ಪಾಕಿಸ್ತಾನದ 3 ಯುದ್ಧ ವಿಮಾನ, 200 ಕ್ಷಿಪಣಿ ಧ್ವಂಸಗೊಳಿಸಿದ ಭಾರತೀಯ ಸೇನೆ: ಭಾರತದ ಹಲವು ನಗರಗಳ ಮೇಲೆ ಪಾಕ್ ದಾಳಿ ಯತ್ನ ವಿಫಲ

ನವದೆಹಲಿ: ಪಾಕಿಸ್ತಾನದ ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ ಮಾಡಲಾಗಿದೆ.

ರಾಜಸ್ಥಾನದ ಜೈಸಲ್ಮೇರ್ ನಗರದಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಸಿದೆ. ಜೈಸಲ್ಮೇರ್  ವಾಯು ನೆಲೆಯ ಮೇಲೆ ಪಾಕಿಸ್ತಾನದಿಂದ ದಾಳಿ ಯತ್ನ ನಡೆಸಲಾಗಿದ್ದು, ಪಾಕಿಸ್ತಾನದ ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.

ಪಠಾಣ್ ಕೋಟ್ ಮೇಲೆ ಪಾಕಿಸ್ತಾನ ದಾಳಿ ಯತ್ನವನ್ನು ಭಾರತೀಯ ಸೇನೆ ವಿಪಫಲಗೊಳಿಸಿದೆ. ಭಾರತದ ಹಲವು ನಗರಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ. ಜಮ್ಮು ವಿಶ್ವವಿದ್ಯಾಲಯ ಬಳಿ ಪಾಕಿಸ್ತಾನದ ಎರಡು ಡ್ರೋನ್ ಗಳನ್ನು ಧ್ವಂಸಗೊಳಿಸಲಾಗಿದೆ. ಎಸ್-400 ಏರ್ ಡಿಫೆನ್ಸ್ ಸಿಸ್ಟಂ ಮೂಲಕ ಪಾಕ್ ಡ್ರೋನ್ ಗಳನ್ನು ಧ್ವಂಸ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮ್ಮುವಿನಲ್ಲಿ ಪಾಕಿಸ್ತಾನದ ದಾಳಿ ವಿಫಲಗೊಳಿಸಿ ಎಂಟು ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೊಪ್ಪವಾರದಲ್ಲಿಯೂ ಪಾಕಿಸ್ತಾನದಿಂದ ಗುಂಡಿನ ದಾಳಿ ನಡೆಸಲಾಗಿದೆ. ಜಮ್ಮುವಿನಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ. ಜನರಿಗೆ ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗಿದೆ. ಜಮ್ಮುವಿನ ವಿವಿಧ ವಲಯಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular