ಶ್ರೀನಗರ: ಜಮ್ಮು ಕಾಶ್ಮೀರದ ಉರಿಯಲ್ಲಿ ಪಾಕಿಸ್ತಾನದಿಂದ ಫೈರಿಂಗ್ ಮಾಡಲಾಗಿದ್ದು, ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಫೈರಿಂಗ್ ನಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಬಾರಾಮುಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಜಮ್ಮುವಿನಲ್ಲಿ ಸೈರನ್ ಗಳು ಮೊಳುಗುತ್ತಿವೆ. ಎಲ್ಒಸಿ ಬಳಿ ಸ್ಪೋಟಗಳ ಸದ್ದು ಕೇಳಿ ಬಂದಿದೆ. ಭಾರೀ ಸ್ಫೋಟದ ಶಬ್ದಕ್ಕೆ ಸ್ಥಳೀಯರು ಬೆದರಿದ್ದಾರೆ.
ರಾಜೌರಿ, ಪೂಂಚ್ ಸೇರಿ ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ(LoC) ಬಳಿ ಸ್ಫೋಟಗಳ ಸದ್ದು ಕೇಳಿಬಂದಿದೆ. ಜಮ್ಮುವಿನಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ.